ADVERTISEMENT

ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕ: ₹10 ಕಡಿತ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 22:30 IST
Last Updated 20 ಫೆಬ್ರುವರಿ 2023, 22:30 IST
   

ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗೆ ಪ್ರತಿ ವಿದ್ಯಾರ್ಥಿಗೆ ನಿಗದಿ ಮಾಡಿದ್ದ ಶುಲ್ಕದಲ್ಲಿ ₹ 10 ಕಡಿತ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಪರೀಕ್ಷಾ ಖರ್ಚು, ವೆಚ್ಚಗಳ ಭಾಗವಾಗಿ ಪ್ರತಿ ವಿದ್ಯಾರ್ಥಿಯಿಂದ ₹ 60 ಸಂಗ್ರಹಿಸಬೇಕು ಎಂದು ಮೊದಲು ಸೂಚಿಸಲಾಗಿತ್ತು. ಈಗ ಪ್ರತಿ ವಿದ್ಯಾರ್ಥಿಯಿಂದ ₹ 50 ಸಂಗ್ರಹಿಸುವಂತೆ ಮರು ಆದೇಶ ಹೊರಡಿಸಲಾಗಿದೆ.

ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಹಂತದಲ್ಲೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಸೂಚಿಸಲಾಗಿದ್ದ ಆದೇಶದಲ್ಲಿ ಮಾರ್ಪಾಡು ಮಾಡಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ,
ಬಿಇಒಗಳ ಲಾಗಿನ್‌ಗೆ ಕಳುಹಿಸುವಂತೆ ಸೂಚಿಸಲಾಗಿದೆ. ಪೂರ್ವಸಿದ್ಧತಾ ಪರೀಕ್ಷೆಗಳು ಫೆ.23ರಿಂದ ಮಾರ್ಚ್‌ 1ರವರೆಗೆ ನಡೆಯಲಿವೆ.

ADVERTISEMENT

ಪ್ರಾಯೋಗಿಕ ಪರೀಕ್ಷೆಗೆ ಮತ್ತೊಮ್ಮೆ ಅವಕಾಶ: ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರು
ಹಾಜರಾದ ವಿದ್ಯಾರ್ಥಿಗಳಿಗೆ ಫೆ.28ರವರೆಗೆ ಹಾಜರಾಗಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೊಮ್ಮೆ ಅವಕಾಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.