ADVERTISEMENT

ವಿದ್ಯಾರ್ಥಿವೇತನ ಕೈಪಿಡಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 19:45 IST
Last Updated 31 ಜನವರಿ 2020, 19:45 IST

ವಿದ್ಯಾರ್ಥಿವೇತನ: ನರೋತಮ್ ಸೆಖಸರಿಯಾ ವಿದ್ಯಾರ್ಥಿವೇತನ 2020

ವಿವರಣೆ: ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂಬೈನ ನರೋತಮ್ ಸೆಖಸರಿಯಾ ಪ್ರತಿಷ್ಠಾನವು ಈ ವಿದ್ಯಾರ್ಥಿವೇತನ ನೀಡುತ್ತದೆ.

ಅರ್ಹತೆ: ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2020ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಒಪ್ಪಿಗೆ ಪಡೆದಿರುವ ಭಾರತೀಯ ವಿದ್ಯಾರ್ಥಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ದೇಶದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪಡೆದಿರಬೇಕು. ವಿದ್ಯಾರ್ಥಿಯ ವಯೋಮಿತಿ 30 ವರ್ಷ.

ADVERTISEMENT

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಮಾರ್ಚ್‌ 12

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/NSS2

ವಿದ್ಯಾರ್ಥಿವೇತನ: ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌ 2020

ವಿವರಣೆ: ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳ ಮಕ್ಕಳ ಕಲಿಕೆಗೆ ಪೂರ್ಣಕಾಲಿಕ ಶಿಕ್ಷಕರನ್ನು ನಿಯೋಜಿಸುವ ಉದ್ದೇಶದಿಂದ ‘ಟೀಚ್‌ ಫಾರ್‌ ಇಂಡಿಯಾ’ ಸಂಸ್ಥೆ ಈ ವಿದ್ಯಾರ್ಥಿವೇತನ ನೀಡುತ್ತದೆ. ಶಿಕ್ಷಕರಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದು.

ಅರ್ಹತೆ: ಪದವಿ ಪೂರ್ಣಗೊಳಿಸಿ ಉನ್ನತ ಶಿಕ್ಷಣ ಮುಂದುವರೆಸಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಯುವ ಸಮುದಾಯ, ಅನುಭವಿ ವೃತ್ತಿಪರರು ಮತ್ತು ಉದ್ಯಮಿಗಳು ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 20,412 ಆರ್ಥಿಕ ನೆರವು ಹಾಗೂ ಹೆಚ್ಚುವರಿ ಸೌಲಭ್ಯಗಳು ದೊರೆಯಲಿವೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಮಾರ್ಚ್‌ 1

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/TFI7

ವಿದ್ಯಾರ್ಥಿವೇತನ: ಇನ್‌ಲಾಕ್ಸ್‌ ವಿದ್ಯಾರ್ಥಿವೇತನ–2020

ವಿವರಣೆ: ಯುರೋಪ್‌, ಅಮೆರಿಕ ಮತ್ತು ಬ್ರಿಟನ್‌ನ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್‌ ಅಥವಾ ಡಾಕ್ಟರೇಟ್‌ ವ್ಯಾಸಂಗ ಮಾಡಬಯಸುವ ಯುವ ವಿದ್ಯಾರ್ಥಿಗಳಿಗೆ ಇನ್‌ಲಾಕ್ಸ್‌ ಶಿವದಾಸಾನಿ ಪ್ರತಿಷ್ಠಾನ ವಿದ್ಯಾರ್ಥಿವೇತನ ನೀಡಲಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪೂರ್ಣ ಬೋಧನಾ ಶುಲ್ಕ, ಜೀವನ ನಿರ್ವಹಣೆಗೆ ಅಗತ್ಯವಿರುವ ನೆರವು, ಆರೋಗ್ಯ ಭತ್ಯೆ ಹಾಗೂ ಏಕಮುಖ ಸಾರಿಗೆ ಭತ್ಯೆಯನ್ನು ವಿದ್ಯಾರ್ಥಿ ವೇತನ ಭರಿಸಲಿದೆ.

ಅರ್ಹತೆ: ಅಭ್ಯರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯೋಮಿ 30 ವರ್ಷ

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ, ಜೀವನ ನಿರ್ವಹಣಾ ವೆಚ್ಚ, ಆರೋಗ್ಯ ಭತ್ಯೆ ಹಾಗೂ ಏಕಮುಖ ಸಾರಿಗೆ ಭತ್ಯೆಯಾಗಿ 1 ಲಕ್ಷ ಅಮೆರಿಕನ್‌ ಡಾಲರ್‌ (₹ 71 ಲಕ್ಷ) ನೆರವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಮಾರ್ಚ್‌ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/INL1


ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.