
ವಿದ್ಯಾರ್ಥಿ ವೇತನ
ರಿಸರ್ಚ್ ಫೆಲೋಷಿಪ್
ಬೆಂಗಳೂರಿನ ಭಾರತೀಯ ವಿಜ್ಞಾನ ಅಕಾಡೆಮಿ, ನವದೆಹಲಿಯ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಮತ್ತು ಪ್ರಯಾಗರಾಜ್‌ನ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ ಸಹಯೋಗದಲ್ಲಿ ‘ಸಮರ್ ರಿಸರ್ಚ್ ಫೆಲೋಷಿಪ್’ ನೀಡಲಾಗುತ್ತಿದೆ.
ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಈ ಯೋಜನೆಯು ಬೆಂಬಲ ನೀಡುತ್ತದೆ.
ಅರ್ಹತೆ: 10ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಪ್ರಮುಖ ವಿಷಯಗಳಲ್ಲಿ ಕನಿಷ್ಠ ಶೇ 65ರಷ್ಟು ಅಂಕಗಳನ್ನು ಪಡೆದಿರಬೇಕು. ಸ್ಟೆಮ್ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ವಿಭಾಗಗಳಲ್ಲಿ ನಿರ್ದಿಷ್ಟ ವಿಷಯಗಳನ್ನು ಅಧ್ಯಯನ ಮಾಡುತ್ತಿರುವವರಾಗಿರಬೇಕು. ವಿಶ್ವವಿದ್ಯಾಲಯಗಳು/ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರೂ ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸಲು ಕೊನೇ ದಿನ: 31-01-2026
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಹೆಚ್ಚಿನ ಮಾಹಿತಿಗೆ: Short Url: www.b4s.in/praja/SASR1
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.