ADVERTISEMENT

ಪದವೀಧರರಿಗೆ ರಿಸರ್ವ್‌ ಬ್ಯಾಂಕ್‌ನಲ್ಲಿ ಕೆಲಸ: 926 ಹುದ್ದೆಗಳು, ₹ 39000 ಸಂಬಳ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 11:14 IST
Last Updated 7 ಜನವರಿ 2020, 11:14 IST
   

ಬೆಂಗಳೂರು:ಭಾರತೀಯ ರಿಸರ್ವ್‌ ಬ್ಯಾಂಕಿನವಿವಿಧ ಶಾಖೆಗಳಲ್ಲಿ ಖಾಲಿ ಇರುವ 926 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ದೇಶದಾದ್ಯಂತ 17 ಪ್ರಾದೇಶಿಕ ಕಚೇರಿಗಳಲ್ಲಿ ಒಟ್ಟು 926 ಹುದ್ದೆಗಳು ಖಾಲಿ ಇವೆ. ಬೆಂಗಳೂರಿನಲ್ಲಿ 21 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ: 926

ADVERTISEMENT

ಮೀಸಲಾತಿ:ಸಾಮಾನ್ಯ–473, ಎಸ್‌ಸಿ–98, ಎಸ್‌ಟಿ–80, ಒಬಿಸಿ–192, ಇಡಬ್ಯೂಎಸ್‌–83, ಇಎಸ್‌ಎಂ–118 ಅಂಗವಿಕಲರು–40

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲರು ಪದವಿಯಲ್ಲಿ ಉತ್ತೀರ್ಣರಾಗಿದ್ದರೆ ಸಾಕು.

ವೇತನ: ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಅನ್ವಯದಂತೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಇದರ ಅನ್ವಯ ₹14800–39000 ಶ್ರೇಣಿಯಲ್ಲಿ ವೇತನ ಸಿಗಲಿದೆ.

ವಯಸ್ಸು: ಕನಿಷ್ಠ 20, ಗರಿಷ್ಠ 28 (ಮೀಸಲಾತಿ ಅನ್ವಯ ಸಡಿಲಿಕೆ ಇದೆ).

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ಭಾಷಾ ಸಾಮರ್ಥ್ಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಇರುತ್ತದೆ.ಪೂರ್ವಭಾವಿ ಪರೀಕ್ಷೆಯನ್ನು 100 ಅಂಕಗಳಿಗೆ, ಮುಖ್ಯಪರೀಕ್ಷೆಯನ್ನು 200 ಅಂಕಗಳಿಗೆ ನಡೆಸಲಾಗುವುದು. ಅಂತಿಮವಾಗಿ ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹450. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಾಜಿ ಯೋಧರಿಗೆ ₹50.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.

ಅರ್ಜಿಗೆ ಕೊನೆಯ ದಿನ: 16 ಜನವರಿ 2020.

ಅಧಿಸೂಚನೆಮಾಹಿತಿ: https://bit.ly/2Zo61Lq

ವೆಬ್‌ಸೈಟ್‌:www.rbi.org.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.