ADVERTISEMENT

ಕೇಂದ್ರ ಲೋಕಸೇವಾ ಆಯೋಗ: 'ಸಿಎಂಎಸ್' ಪರೀಕ್ಷೆಯ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 9:11 IST
Last Updated 16 ಸೆಪ್ಟೆಂಬರ್ 2021, 9:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೇಂದ್ರ ಲೋಕಸೇವಾ ಆಯೋಗ ನಡೆಸುವ 'ಸಿಎಂಎಸ್' (combined medical services) ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.

ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಯ ವೇಳಾಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗದ ವೆಬ್‌ಸೈಟ್‌ ಮೂಲಕವು ನೋಡಬಹುದು.

ಬರುವ ನವೆಂಬರ್ 21ರಂದು ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ. ಒಟ್ಟು 2 ಪತ್ರಿಕೆಗಳು ಇರಲಿವೆ. ಬೆಳಗ್ಗೆ ಜನರಲ್‌ ಮೆಡಿಸನ್‌ಪತ್ರಿಕೆ ಹಾಗೂ ಮಧ್ಯಾಹ್ನ ಸರ್ಜರಿ ಪತ್ರಿಕೆಯ ಪರೀಕ್ಷೆ ನಡೆಯಲಿದೆ.

ADVERTISEMENT

ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್ ಕಾರ್ಡ್‌ ಹಾಗೂ ತಮ್ಮ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗಬೇಕು ಎಂದುಕೇಂದ್ರ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹಾಗೂ ಪರೀಕ್ಷೆ ವೇಳಾಪಟ್ಟಿಗೆ www.upsc.nic.in ವೆಬ್‌ಸೈಟ್‌ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.