ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಯಶಸ್ಸು ಸಾಧಿಸಿದ್ದಾರೆ.
ಡಾ. ರಂಗ ಮಂಜು 24ನೇ ಮತ್ತು ಡಾ. ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.
2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಇವರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇವರಲ್ಲಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.