ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಯಾವ ಎಂಜಿನಿಯರಿಂಗ್ ಕೋರ್ಸ್‌ಗೆ ಉತ್ತಮ ಅವಕಾಶ

ಪ್ರದೀಪ್ ಕುಮಾರ್ ವಿ.
Published 31 ಮಾರ್ಚ್ 2024, 23:30 IST
Last Updated 31 ಮಾರ್ಚ್ 2024, 23:30 IST
<div class="paragraphs"><p>ಪ್ರದೀಪ್ ಕುಮಾರ್ ವಿ.</p></div>

ಪ್ರದೀಪ್ ಕುಮಾರ್ ವಿ.

   

1. ನಾನು ಪಿಯುಸಿ ಮುಗಿಸಿ, ಸಿಇಟಿಗೆ ತಯಾರಿ ನಡೆಸುತ್ತಿದ್ದೇನೆ. ಯಾವ ಎಂಜಿನಿಯರಿಂಗ್ ಕೋರ್ಸಿಗೆ ಉತ್ತಮ ಉದ್ಯೋಗಾವಕಾಶಗಳಿವೆ?

–ಹೆಸರು, ಊರು ತಿಳಿಸಿಲ್ಲ

ADVERTISEMENT

ಈಗ ಕಂಪ್ಯೂಟರ್ ಸೈನ್ಸ್, ಐಟಿ, ರೊಬಾಟಿಕ್ಸ್, ಆರ್ಟಿಫಿಷಿಯಲ್ ಇಂಟಲಿಜೆನ್ಸ್, ಮೆಷಿನ್ ಲರ್ನಿಂಗ್, ಡೇಟಾ ಸೈನ್ಸ್, ಸೈಬರ್ ಸೆಕ್ಯೂರಿಟಿ ಕೋರ್ಸ್‌ಗ ಳಿಗೆ ಹೆಚ್ಚಿನ ಬೇಡಿಕೆ ಇದೆ. ಜೊತೆಗೆ, ಸಾಂಪ್ರದಾಯಿಕ ವಿಭಾಗಗಳಾದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್, ಎಲೆಕ್ಟ್ರಿಕಲ್‌ ಅಂಡ್ ಎಲೆಕ್ಟ್ರಾನಿಕ್ಸ್‌, ಬಯೋಮೆಡಿಕಲ್, ಬಯೋಟೆಕ್, ಏರೋನಾಟಿಕಲ್, ಮೆಕ್ಯಾನಿಕಲ್, ಮೆಕಾಟ್ರಾನಿಕ್ಸ್ ಇತ್ಯಾದಿ ವಿಭಾಗಗಳಿಗೂ ಸಾಧಾರಣವಾದ ಬೇಡಿಕೆಯಿದೆ. ಎಂಜಿನಿಯರಿಂಗ್‌ನಲ್ಲಿ ಐವತ್ತಕ್ಕೂ ಹೆಚ್ಚಿನ ವಿಭಾಗಗಳಿದ್ದು. ಕೋರ್ಸ್ ಫಲಿತಾಂಶ ಉತ್ಕೃಷ್ಟವಾಗಿದ್ದರೆ, ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ.

ಎಂಜಿನಿಯರಿಂಗ್ ವೃತ್ತಿಗೆ ಗಣಿತದಲ್ಲಿ ತಜ್ಞತೆ, ವಿಶ್ಲೇಷಾತ್ಮಕ ಕೌಶಲ, ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲ ಅಗತ್ಯವಾಗುತ್ತದೆ. ಹಾಗೂ, ಆಯಾ ವಿಭಾಗಗಳ ವಿಷಯಗಳಲ್ಲಿ ಆಸಕ್ತಿ ಮತ್ತು ಸ್ವಾಭಾವಿಕ ಪ್ರತಿಭೆ ಇರಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.