ADVERTISEMENT

ಮತಗಟ್ಟೆಗೆ ಸಾರಿಗೆ ವ್ಯವಸ್ಥೆ: ಸಿಇಒ ಮಾನಕರ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 15:12 IST
Last Updated 25 ಮಾರ್ಚ್ 2019, 15:12 IST
ಬಾಗಲಕೋಟೆಯಲ್ಲಿ ಸೋಮವಾರ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಉದ್ಘಾಟಿಸಿದರು
ಬಾಗಲಕೋಟೆಯಲ್ಲಿ ಸೋಮವಾರ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಉದ್ಘಾಟಿಸಿದರು   

ಬಾಗಲಕೋಟೆ: ‘ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಅಂಗವಿಕಲರಿಗೆ ಅನುಕೂಲವಾಗಲೆಂದು ಮತಗಟ್ಟೆಯವರೆಗೆ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಇಲ್ಲಿನ ನವನಗರದ ಕಲಾಭವನದಲ್ಲಿ ಸೋಮವಾರಜಿಲ್ಲಾ ಸ್ವೀಪ್ ಯೋಜನೆಯಡಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ‘ಜಿಲ್ಲೆಯಲ್ಲಿ ಒಟ್ಟು 16,556 ಅಂಗವಿಕಲ ಮತದಾರರಿದ್ದು, ಮತದಾನ ದಿನದಂದು ಮನೆಯಿಂದ ಮತಗಟ್ಟೆಗೆ ಹಾಗೂ ಮತಗಟ್ಟೆಯಿಂದ ಮರಳಿ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

‘ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಶೇ 68 ರಷ್ಟು ಮತದಾನವಾಗಿದ್ದು, ಈ ಬಾರಿ ಶೇ100 ಮತ ಪ್ರಮಾಣದ ಗುರಿ ಹೊಂದಲಾಗಿದ್ದು, ಅದಕ್ಕೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದರು.

ADVERTISEMENT

‘ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2ರಂತೆ ಮಹಿಳೆಯರಿಗಾಗಿ ಸಖಿ(ಪಿಂಕ್) ಮತಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಮತದಾನ ಎನ್ನುವುದು ಒಂದು ಪವಿತ್ರ ಕಾರ್ಯವಾಗಿದ್ದು, ಪ್ರತಿಯೊಬ್ಬರು ತಮ್ಮ ಹಕ್ಕು ಚಲಾಯಿಸುವ ಅವಕಾಶ ಇದಾಗಿದೆ. ಜನವರಿ 1, 2019ಕ್ಕೆ 18 ವರ್ಷ ತುಂಬಿದ ಯುವಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಏಪ್ರಿಲ್ 4ರವರೆಗೆ ಅವಕಾಶವಿದೆ. ಸದೃಢ, ನ್ಯಾಯಯುತವಾದ ವ್ಯಕ್ತಿಯನ್ನು ಆಯ್ಕೆಮಾಡಲು ಚುನಾವಣೆ ಒಂದು ಮಹತ್ವದ ಕಾರ್ಯವಾಗಿದೆ ಎಂದರು.

ಬೆಳಗಾವಿಯ ರೇಖಾ ಹೆಗಡೆ ಅವರಿಂದ ಚಿದಂಬರ ರೂಪಕ ಭರತನಾಟ್ಯ ಕಲಾ ಪ್ರದರ್ಶನ ನಡೆಯಿತು. ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಜಿಲ್ಲಾ ಪಂಚಾಯ್ತಿಯ ಸಿಪಿಒ ನಿಂಗಪ್ಪ ಗೋಠೆ, ಮುಖ್ಯಲೆಕ್ಕಾಧಿಕಾರಿ ಶಾಂತಾ ಖಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಬಸಣ್ಣವರ, ಸ್ವೀಪ್ ರಾಯಬಾರಿ ಸಿದ್ದಾರೂಢ ಕೊಪ್ಪದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.