ADVERTISEMENT

113ರಲ್ಲಿ 50 ಗೆಲ್ಲಲು ಕಾಂಗ್ರೆಸ್ ಪಣ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 19:39 IST
Last Updated 21 ಮಾರ್ಚ್ 2019, 19:39 IST
ಕಾಂಗ್ರೆಸ್‌ನ ರ‍್ಯಾಲಿಯಲ್ಲಿ ಪಕ್ಷದ ಕಾರ್ಯಕರ್ತರ ಸಂಭ್ರಮ –ಸಂಗ್ರಹ ಚಿತ್ರ
ಕಾಂಗ್ರೆಸ್‌ನ ರ‍್ಯಾಲಿಯಲ್ಲಿ ಪಕ್ಷದ ಕಾರ್ಯಕರ್ತರ ಸಂಭ್ರಮ –ಸಂಗ್ರಹ ಚಿತ್ರ   

ನವದೆಹಲಿ:ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಮತ್ತು ಮಹಾರಾಷ್ಟ್ರದಲ್ಲಿ ಕನಿಷ್ಠ 50 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಗುರಿಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಈ ನಾಲ್ಕೂ ರಾಜ್ಯಗಳಲ್ಲಿ ಒಟ್ಟು 113 ಲೋಕಸಭಾ ಕ್ಷೇತ್ರಗಳಿವೆ.2014ರ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಪಕ್ಷವು ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಛತ್ತೀಸಗಡದಲ್ಲಿ ಒಂದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ತಲಾ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಈಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಇದು ಪಕ್ಷದ ಹುರುಪನ್ನು ಹೆಚ್ಚಿಸಿದೆ. ಮಹಾರಾಷ್ಟ್ರವೂ ಸೇರಿ ನಾಲ್ಕು ರಾಜ್ಯಗಳಿಂದ ಪಕ್ಷದ 50 ಸಂಸದರಾದರೂ ಆರಿಸಿ ಬರಬೇಕು. ಹೀಗಾಗಿ ಪಕ್ಷವು ತಂತ್ರ ರೂಪಿಸುತ್ತಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.