ADVERTISEMENT

ಯಾರ ಬೆಂಬಲವೂ ಮುಖ್ಯವಲ್ಲ, ಫಲಿತಾಂಶ ನಿರ್ಧಾರವಾಗಿದೆ: ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಿಂದ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 13:31 IST
Last Updated 30 ಏಪ್ರಿಲ್ 2019, 13:31 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ‘ಯಾರು ಬೆಂಬಲ ನೀಡಲಿ, ಬಿಡಲಿ ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ’ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾತನಾಡಿರುವ ವಿಡಿಯೊ ಕ್ಲಿಪ್ಪಿಂಗ್ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದೆ.

‘ಮುಂದಿನ ದಿನಗಳಲ್ಲಿ ಯಾರು, ಎಲ್ಲಿಂದ ಬೆಂಬಲ ನೀಡುತ್ತಾರೆ, ಯಾರು ನೀಡುವುದಿಲ್ಲ ಎಂಬುದು ಮುಖ್ಯವಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿಯೇ ಮತ ಚಲಾಯಿಸುವುದು ಎಂದು ಜನ ನಿರ್ಧರಿಸಿದ್ದಾರೆ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ. ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡಬೇಕಾಗಿರುವುದಷ್ಟೇ ನಾವೀಗ ಮಾಡಬೇಕಿರುವ ಕೆಲಸ’ ಎಂದು ಸೂರ್ಯ ಹೇಳಿದ್ದಾರೆ.

ADVERTISEMENT

ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ಕೊನೇ ಕ್ಷಣದಲ್ಲಿ ಟಿಕೆಟ್ ತಪ್ಪಿಸಿ ತೇಜಸ್ವಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ರಾಜ್ಯ ನಾಯಕರು ಈಗಾಗಲೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ, ಚುನಾವಣಾ ಪ್ರಚಾರದಲ್ಲೂ ಸರಿಯಾಗಿ ಭಾಗವಹಿಸುತ್ತಿಲ್ಲ. ಪ್ರಚಾರದಲ್ಲಿ ಭಾಗವಹಿಸುವ ಬಗ್ಗೆ ತೇಜಸ್ವಿನಿ ಅವರೂ ಇನ್ನೂ ಏನೂ ಹೇಳಿಲ್ಲ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ಪ್ರಚಾರ ನಡೆಸಿದ್ದ ಬೊಮ್ಮನಹಳ್ಳಿಯ ಶಾಸಕ ಸತೀಶ್‌ ರೆಡ್ಡಿ ಅಭ್ಯರ್ಥಿಯ ಹೆಸರು ಹೇಳದೆಯೇ ಮತ ಯಾಚಿಸಿದ್ದರು. ‘ಈ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ನಗಣ್ಯ. ಮೋದಿ ಮತ್ತು ಯಡಿಯೂರಪ್ಪ ಅವರೇ ನಮ್ಮ ಅಭ್ಯರ್ಥಿ. ಅವರೇ ನಮ್ಮ ಜೋಡೆತ್ತುಗಳು ಎಂದು ಭಾವಿಸಿ ಕೆಲಸ ಮಾಡೋಣ’ ಎಂದು ರೆಡ್ಡಿ ಹೇಳಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.