ADVERTISEMENT

ಬಿಜೆಪಿಯಿಂದ ಬಿರುಸಿನ ಪ್ರಚಾರ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 11:52 IST
Last Updated 13 ಏಪ್ರಿಲ್ 2019, 11:52 IST
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಅವರು ಶನಿವಾರ ಹೊಸಪೇಟೆಯ 32ನೇ ವಾರ್ಡಿನಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಿದರು
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಅವರು ಶನಿವಾರ ಹೊಸಪೇಟೆಯ 32ನೇ ವಾರ್ಡಿನಲ್ಲಿ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಿದರು   

ಹೊಸಪೇಟೆ: ನಗರದ 32ನೇ ವಾರ್ಡ್‌ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶನಿವಾರ ಬಿರುಸಿನ ಪ್ರಚಾರ ಕೈಗೊಂಡರು.

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ನೇತೃತ್ವದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಅವರನ್ನು ಬೆಂಬಲಿಸಿ, ಪುನಃ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಮಂಡಲ ಅಧ್ಯಕ್ಷ ಅನಂತ ಪದ್ಮನಾಭ, ಮಾಧ್ಯಮ ಸಂಚಾಲಕ ಶಂಕರ್‌ ಮೇಟಿ, ಮುಖಂಡರಾದ ಕವಿರಾಜ ಅರಸ್‌, ಜಂಬಾನಹಳ್ಳಿ ವಸಂತ, ದೇವರಮನಿ ಶ್ರೀನಿವಾಸ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.