ADVERTISEMENT

ಜನನಾಯಕ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 10:15 IST
Last Updated 16 ಏಪ್ರಿಲ್ 2019, 10:15 IST
   

ಚಿತ್ರದುರ್ಗ: ನಾನೊಬ್ಬ ಜನನಾಯಕ ಎಂಬ ಬಿರುದನ್ನು ರಾಜ್ಯದ ಜನ ಈಗಾಗಲೇ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಂದ ಪ್ರಮಾಣ ಪತ್ರ ಪಡೆಯುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದರು.

‘ಯಡಿಯೂರಪ್ಪ ಏನು ನಾಯಕರಾ’ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಚಳ್ಳಕೆರೆಯಲ್ಲಿ ಸುದ್ದಿಗಾರಿಗೆ ಪ್ರತಿಕ್ರಿಯೆ ನೀಡಿದರು.

‘ಬಿಜೆಪಿಗೆ ಅಧಿಕಾರ ತಪ್ಪಿಸಬೇಕು ಎಂಬ ಉದ್ದೇಶದಿಂದ ವೀರಶೈವ ಸಮಾಜವನ್ನು ಒಡೆಯಲು ಕಾಂಗ್ರೆಸ್‌ ಪ್ರಯತ್ನಿಸಿತು. ಸೋನಿಯಾ ಗಾಂಧಿ ಅವರ ಸೂಚನೆಯ ಮೇರೆಗೆ ಈ ಷಡ್ಯಂತ್ರ ರೂಪಿಸಲಾಗಿತ್ತು ಎಂಬುದನ್ನು ಗೃಹ ಸಚಿವ ಎಂ.ಬಿ.ಪಾಟೀಲ ಈಗಾಗಲೇ ಒಪ್ಪಿಕೊಂಡಿದ್ದಾರೆ’ ಎಂದು ದೂರಿದರು.

ADVERTISEMENT

‘ನಿರೀಕ್ಷೆಗೂ ಮೀರಿ ಬಿಜೆಪಿಗೆ ಬೆಂಬಲ ಸಿಗುತ್ತಿದೆ. ದೇಶದಲ್ಲಿ ಮೋದಿ ಅಲೆ ಸೃಷ್ಟಿಯಾಗಿದೆ. ಚಿತ್ರದುರ್ಗದ ಎ.ನಾರಾಯಣಸ್ವಾಮಿ ಸೇರಿ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ. ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮಂಡ್ಯದ ಮತದಾರರಿಗೆ ₹ 200 ಬದಲು ಎರಡು ಕೋಟಿ ಹಂಚಿದರೂ ಜೆಡಿಎಸ್‌ ಗೆಲ್ಲಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಇದರ ಮೇಲೆ ನಿಗಾ ಇಟ್ಟಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.