ADVERTISEMENT

ರಾಷ್ಟ್ರ ಮುನ್ನಡೆಸಲು ಮತ ಚಲಾಯಿಸಿ: ಚುನಾವಣಾ ರಾಯಭಾರಿ, ನಟ ರಮೇಶ್‌ ಅರವಿಂದ್

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚುನಾವಣಾ ರಾಯಭಾರಿ, ನಟ ರಮೇಶ್ ಅರವಿಂದ್‌

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 15:34 IST
Last Updated 8 ಏಪ್ರಿಲ್ 2024, 15:34 IST
ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ಚುನಾವಣಾ ರಾಯಭಾರಿ ರಮೇಶ್‌ ಅರವಿಂದ್ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ಚುನಾವಣಾ ರಾಯಭಾರಿ ರಮೇಶ್‌ ಅರವಿಂದ್ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.   

ಬೆಂಗಳೂರು: ‘ರಾಷ್ಟ್ರವನ್ನು ಮುನ್ನಡೆಸಲು ಎಲ್ಲರೂ ತಪ್ಪದೇ ಮತ ಚಲಾಯಿಸೋಣ. ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಇಚ್ಛೆಯಿಂದ ಮತದಾನ ಮಾಡೋಣ’ ಎಂದು ಚುನಾವಣಾ ರಾಯಭಾರಿ ರಮೇಶ್‌ ಅರವಿಂದ್ ತಿಳಿಸಿದರು.

ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು? ಏನೇನು ಕೆಲಸ ಮಾಡಿದ್ದಾರೆ? ಅವರ ಹಿನ್ನೆಲೆ ಏನು? ಹಿಂದೆ ಅಭ್ಯರ್ಥಿಯಾಗಿದ್ದರೆ, ಅವರು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಎಷ್ಟನ್ನು ಈಡೇರಿಸಿದ್ದಾರೆ ಎಂದು ಪರಿಶೀಲಿಸಬೇಕು. ಆಲೋಚಿಸಿ ಮತದಾನ ಮಾಡಬೇಕು. ಯಾರೋ ಹೇಳಿದ ಮಾತು ಕೇಳಿ ಮತದಾನ ಮಾಡಬಾರದು’ ಎಂದು ಕಿವಿಮಾತು ಹೇಳಿದರು.

ADVERTISEMENT

ಇದೇ ವೇಳೆ ವಿದ್ಯಾರ್ಥಿಗಳು ‘ತಪ್ಪದೇ ಮತದಾನ ಮಾಡುತ್ತೇವೆ’ ಎಂದು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಚಾರ್ಯೆ ವಸುಂಧರಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.