ADVERTISEMENT

ಕೇಜ್ರಿವಾಲ್‌ ನಿಷೇಧಕ್ಕೆ ಕಾಂಗ್ರೆಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 18:49 IST
Last Updated 26 ಏಪ್ರಿಲ್ 2019, 18:49 IST
ಕೇಜ್ರಿವಾಲ್‌
ಕೇಜ್ರಿವಾಲ್‌   

ನವದೆಹಲಿ: ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಅವರು ಪ್ರಚೋದನಕಾರಿ ಮತ್ತು ಕೋಮುವಾದಿ ಹೇಳಿಕೆ
ನೀಡಿದ್ದು ಅವರಿಗೆ ಪ್ರಚಾರ ನಿಷೇಧ ಹೇರಬೇಕು ಎಂದು ಕಾಂಗ್ರೆಸ್‌ ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಕಾಂಗ್ರೆಸ್‌ನ ಮಾಜಿ ಸಂಸದ ಸಂದೀಪ್‌ ದೀಕ್ಷಿತ್‌ ನೇತೃತ್ವದಲ್ಲಿ ಪಕ್ಷದ ನಿಯೋಗವೊಂದು ಶುಕ್ರವಾರ ದೆಹಲಿಯ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಮಾಡಿ, ‘ಕೇಜ್ರಿವಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದೆ.

‘‘ಕಾಂಗ್ರೆಸ್‌ಗೆ ಒಬ್ಬನೇ ಒಬ್ಬ ಹಿಂದೂ ಮತ ನೀಡುವುದಿಲ್ಲ. ಮುಸ್ಲಿಮರೂ ಆ ಪಕ್ಷಕ್ಕೆ ಮತ ನೀಡಬಾರದು’ ಎಂದು ಹೇಳಿದ್ದರು. ಆ ಮೂಲಕ ಅವರು ಮತ ಗಳಿಕೆಗಾಗಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವ ಪ್ರಯತ್ನ ಮಾಡಿದ್ದಾರೆ’ ಎಂದು ಕಾಂಗ್ರೆಸ್‌ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.