ADVERTISEMENT

ಕೋಮುವಾದಿ ಪಕ್ಷ ಅಧಿಕಾರದಿಂದ ದೂರ ಇಡಲು ಸ್ಪರ್ಧೆ: ದೇವೇಗೌಡ 

​ಪ್ರಜಾವಾಣಿ ವಾರ್ತೆ
Published 2 ಮೇ 2019, 10:53 IST
Last Updated 2 ಮೇ 2019, 10:53 IST
ತುಮಕೂರಿನಲ್ಲಿ ಸೋಮವಾರ ಎಚ್.ಡಿ.ದೇವೇಗೌಡ ಅವರು ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳುವಾಗ ಜೆಡಿಎಸ್ ಮತ್ತು ಕಾಂಗ್ರೆಸ್ ಸಾವಿರಾರು ಕಾರ್ಯಕರ್ತರು  ಪಾಲ್ಗೊಂಡಿದ್ದರು
ತುಮಕೂರಿನಲ್ಲಿ ಸೋಮವಾರ ಎಚ್.ಡಿ.ದೇವೇಗೌಡ ಅವರು ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳುವಾಗ ಜೆಡಿಎಸ್ ಮತ್ತು ಕಾಂಗ್ರೆಸ್ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು   

ತುಮಕೂರು: ದೇಶದಲ್ಲಿ ಕೋಮುವಾದಿ ಶಕ್ತಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್ ಕಾಂಗ್ರೆಸ್ ಮೈತ್ರಿ ಒಟ್ಟಿಗೆ ಹೋರಾಟ ನಡೆಸಲಿದ್ದು, ಹೀಗಾಗಿ ನಾನು ಸ್ಪರ್ಧೆ ಮಾಡಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾಧಿಕಾರಿ ಕಚೇರಿ ಹೊರಗಡೆ ಜನರನ್ನುದ್ದೇಶಿ ಮಾತನಾಡಿದರು.

ನನಗೆ ಯಾವುದೇ ಜಾತಿ, ಧರ್ಮ ತಾರತಮ್ಯ ಗೊತ್ತಿಲ್ಲ.ಯಾರೊಂದಿಗೂ ವೈಷಮ್ಯವಿಲ್ಲ. ಮಾಧ್ಯಮಗಳಲ್ಲಿ ತೋರಿಸುವ ಹಾಗೆ ಸಿದ್ಧರಾಮಯ್ಯ ಮತ್ತು ನಮ್ಮ ನಡುವೆ ಮನಸ್ತಾಪ ಇಲ್ಲ. ಇಬ್ಬರೂ ಒಟ್ಟಿಗೆ ರಾಜ್ಯವ್ಯಾಪಿ ಪ್ರವಾಸ ಮಾಡಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ADVERTISEMENT

ತುಮಕೂರು ಕ್ಷೇತ್ರಕ್ಕೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉಪಮುಖ್ಯಮಂತ್ರಿ ಸೇರಿದಂತೆ ಅನೇಕರು ಮನವಿ ಮಾಡಿದರು. ಹೀಗಾಗಿ ಸ್ಪರ್ಧೆ ಮಾಡಿದ್ದೇನೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಗೆಲುವಿಗೆ ಶ್ರಮಿಸುವ ಭರವಸೆ ನೀಡಿದ್ದಾರೆ ಎಂದರು.

ಮಾ.31 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರುವ ಸೂಚನೆ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.