ADVERTISEMENT

ದೇವನಹಳ್ಳಿ ಕ್ಷೇತ್ರ ಮೊಯಿಲಿಗೆ ಹೆಚ್ಚು ಮತ 

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 14:57 IST
Last Updated 15 ಏಪ್ರಿಲ್ 2019, 14:57 IST
ಕಾಂಗ್ರೆಸ್ ಮುಖಂಡರು ಮತಯಾಚಿಸಿದರು
ಕಾಂಗ್ರೆಸ್ ಮುಖಂಡರು ಮತಯಾಚಿಸಿದರು   

ದೇವನಹಳ್ಳಿ:ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿಗೆ ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳು ಸಿಗಲಿದೆ ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಚುನಾವಣಾ ವೀಕ್ಷಕ ಡಿ.ವಿ. ಕೃಷ್ಣಮೂರ್ತಿ ಹೇಳಿದರು.

ಕುಂದಾಣ ಹೋಬಳಿ ವಿವಿಧ ಗ್ರಾಮಗಳಲ್ಲಿನ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಪ್ರಚಾರ ವೀಕ್ಷಿಸಿ ಅವರು ಮಾತನಾಡಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಮೂಲ ಕಾರ್ಯಕರ್ತರಿದ್ದಾರೆ. ಬಿಜೆಪಿ ಮತ್ತು ಬಿಎಸ್‌ಪಿಗೆ ಹೇಳಿಕೊಳ್ಳವ ಕಾರ್ಯಕರ್ತರಿಲ್ಲ. ಕ್ಷೇತ್ರದ ಅಭಿವೃದ್ಧಿ ನೋಡಿ ನಾವು ಮತ ಕೇಳುತ್ತೇವೆ. ಆದರೆ, ಮೋದಿ ಮುಖ ನೋಡಿ ಯಾರು ಮತ ಹಾಕಲ್ಲ. ಮೋದಿ ಅಲೆ ಸದ್ಯಕ್ಷೆ ಈ ಕ್ಷೇತ್ರದಲ್ಲಿ ಇಲ್ಲ, ನಡೆಯುವುದು ಇಲ್ಲ ಎಂದು ಹೇಳಿದರು.

ADVERTISEMENT

ಜೆಡಿಎಸ್ ಮುಖಂಡ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ವಿ.ಸ್ವಾಮಿ, ಬೀಸೇಗೌಡ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಮಮತ, ಮುಖಂಡರಾದ ಬಾಲಕೃಷ್ಣ, ದೇವರಾಜ್‌, ಎನ್.ಟಿ.ನಾಗೇಶ್, ಶಾಂತಕುಮಾರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕ ಅಧ್ಯಕ್ಷ ಮಾರುತಿ, ಜೆಡಿಎಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.