ADVERTISEMENT

ಅಮೇಠಿ: ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2014, 19:30 IST
Last Updated 16 ಏಪ್ರಿಲ್ 2014, 19:30 IST
ಅಮೇಠಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಹವನದಲ್ಲಿ ಪಾಲ್ಗೊಂಡರು 	–ಪಿಟಿಐ ಚಿತ್ರ
ಅಮೇಠಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಹವನದಲ್ಲಿ ಪಾಲ್ಗೊಂಡರು –ಪಿಟಿಐ ಚಿತ್ರ   

ಅಮೇಠಿ (ಪಿಟಿಐ): ‘ಈ ಬಾರಿ ರಾಹುಲ್‌ ಗಾಂಧಿ ಅವರನ್ನು ಸೋಲಿಸಲು ಜನ ನಿರ್ಧರಿಸಿ­ದ್ದಾರೆ. ಅಮೇಠಿ­ಯಲ್ಲಿ ಇತಿಹಾಸ ರಚನೆಯಾಗಲಿದೆ’ ಎಂದು ಅಮೇಠಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಭವಿಷ್ಯ ನುಡಿದಿದ್ದಾರೆ.

ಬುಧವಾರ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ‘ರಾಹುಲ್‌ ಈ ದೇಶದ ಪ್ರಧಾನಿ ಆಗುವುದು ಸಾಧ್ಯವಿಲ್ಲ. ಅವರ ಪಕ್ಷದ ಸದಸ್ಯರಿಗೇ ಅವರ ಮೇಲೆ ವಿಶ್ವಾಸವಿಲ್ಲ’ ಎಂದು ತಮ್ಮ ಪ್ರಬಲ ಎದುರಾಳಿ  ರಾಹುಲ್‌ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕುಮಾರ್ ವಿಶ್ವಾಸ್‌ ವಿರುದ್ಧ ಕಿಡಿ: ‘ಎಎಪಿ ಅಭ್ಯರ್ಥಿ ಕುಮಾರ್‌ ವಿಶ್ವಾಸ್‌ ಅವರಿಗೆ ಸ್ತ್ರೀಯರೊಂದಿಗೆ ಹೇಗೆ ವರ್ತಿಸಬೇಕು ಎಂಬುದು ತಿಳಿದಿಲ್ಲ. ನಾನು ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ’ ಎಂದು ಸ್ಮೃತಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.