ADVERTISEMENT

ಅಸ್ಸಾಂ ಸಚಿವರಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2014, 19:30 IST
Last Updated 12 ಏಪ್ರಿಲ್ 2014, 19:30 IST

ಗುವಾಹಟಿ (ಪಿಟಿಐ): ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಅಸ್ಸಾಂ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ನಜರುಲ್‌ ಇಸ್ಲಾಂ ಅವರಿಗೆ ಚುನಾವಣಾ ಆಯೋಗ ಕಾರಣ ಕೇಳಿ ನೋಟಿಸ್‌ ನೀಡಿದೆ.

‘ಹೊಜೈನಲ್ಲಿ ಮಾರ್ಚ್‌ 21ರಂದು ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಇಸ್ಲಾಂ ಅವರು, ‘ಮೋದಿ  ಅವರು ಪ್ರಧಾನಿ­ಯಾದರೆ ಮುಸ್ಲಿಂರಿಗೆ ಕೆಟ್ಟದಾಗುತ್ತದೆ’ ಎಂದು ಹೇಳಿಕೆ ನೀಡಿದ್ದರು ಎಂದು ಬಿಜೆಪಿ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ನೋಟಿಸ್‌ ನೀಡಲಾಗಿದೆ’ ಎಂದು ಅಸ್ಸಾಂ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಆರ್‌.ಸಿ. ಜೈನ್‌ ತಿಳಿಸಿದ್ದಾರೆ. ನೋಟಿಸ್‌ಗೆ ಏಪ್ರಿಲ್‌ 15ರಂದು ಬೆಳಿಗ್ಗೆ 11.30ರ ಒಳಗಾಗಿ ಉತ್ತರಿಸುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.