ADVERTISEMENT

ಆಮಿಷ: ವೈಎಸ್‌ಆರ್‌ಸಿ ಶಾಸಕ ಸೆರೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 19:30 IST
Last Updated 21 ಮಾರ್ಚ್ 2014, 19:30 IST

ಹೈದರಾಬಾದ್‌ (ಪಿಟಿಐ): ಚುನಾವಣಾ ಸಂಬಂಧಿ ಅಪರಾಧಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕ ಕಾಪು ರಾಮಚಂದ್ರ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿರುವ ಶಾಸಕರ ನಿವಾಸ, ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿ 3,200 ಗೋಡೆ ಗಡಿಯಾರ, ಡೈರಿಗಳು, ಸಿದ್ಧಉಡುಪು, ಬಳೆಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೆಂಥಿಲ್‌ ಕುಮಾರ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.