ಮುಂಬೈ (ಪಿಟಿಐ): ಇತ್ತೀಚೆಗೆ ಬಿಜೆಪಿ ಮುಖಂಡ ನಿತಿನ್ ಗಡ್ಕರಿ, ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರನ್ನು ಭೇಟಿಯಾಗಿ ಸೃಷ್ಟಿಸಿದ ಗೊಂದಲಕ್ಕೆ ತಿರುಗೇಟು ನೀಡಿರುವ ಶಿವಸೇನೆ ಚುನಾವಣೆಯಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
‘ನಾವು ಬಿಜೆಪಿಯೊಂದಿಗೆ ಮಹಾರಾಷ್ಟ್ರದಲ್ಲಿ ಮಾತ್ರ ಮೈತ್ರಿ ಹೊಂದಿದ್ದೇವೆ. ಉತ್ತರ ಪ್ರದೇಶದಲ್ಲಿ ಇಲ್ಲ. ದೇಶದ ಇತರ ಭಾಗಗಳಲ್ಲಿಯೂ ಪಕ್ಷವನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಪ್ರದೇಶದ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಶಿವಸೇನೆಯ ವಕ್ತಾರ ಸಂಜಯ ರಾವುತ್ ತಿಳಿಸಿದ್ದಾರೆ.
ಮೈತ್ರಿ ಮುರಿಯದು– ಬಿಜೆಪಿ: ಯಾವುದೇ ಬಿಕ್ಕಟ್ಟುಗಳು ಕಾಣಿಸಿಕೊಂಡರೆ ಮಾತುಕತೆ ಮೂಲಕ ಅದನ್ನು ಬಗೆಹರಿಸಲಾಗುವುದು. ಬಿಜೆಪಿ–ಶಿವಸೇನೆ ನಡುವಣ ಮೈತ್ರಿ ಯಾವ ಕಾರಣಕ್ಕೂ ಮುರಿಯುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಈ ಬೆಳವಣಿಗೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.