ನವದೆಹಲಿ (ಐಎಎನ್‌ಎಸ್): ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಾರ್ಚ್ 23ಕ್ಕೆ ನಿಗದಿಯಾಗಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ರ್‍್ಯಾಲಿ 25ಕ್ಕೆ ಮುಂದೂಡಲಾಗಿದೆ.
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನಗರಾಡಳಿತದಿಂದ ಅನುಮತಿ ಸಿಗದಿದ್ದರಿಂದ ರ್‍್ಯಾಲಿಯನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು ಪಕ್ಷದ ಮುಖಂಡರೊಬ್ಬರು ಮಂಗಳವಾರ ಹೇಳಿದ್ದಾರೆ.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ರ್‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.