ADVERTISEMENT

ಎರಡನೇ ಹಂತದಲ್ಲಿ 358 ಅಭ್ಯರ್ಥಿಗಳು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2014, 19:30 IST
Last Updated 13 ಏಪ್ರಿಲ್ 2014, 19:30 IST

ಮುಂಬೈ (ಪಿಟಿಐ): ಮಹಾರಾಷ್ಟ್ರದ 19 ಕ್ಷೇತ್ರಗಳಿಗೆ ಏಪ್ರಿಲ್‌ 17ರಂದು ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ  358  ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸುಮಾರು 3.25 ಕೋಟಿ ಮತದಾರರು ಅಂದು ಮತ ಚಲಾಯಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ, ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌, ಬಿಜೆಪಿಯ ಹಿರಿಯ ಮುಖಂಡ ಗೋಪಿನಾಥ್‌ ಮುಂಡೆ ಸೇರಿದಂತೆ 358 ಮಂದಿ ತಮ್ಮ ಅದೃಷ್ಟವನ್ನು ಪರೀಕ್ಷೆಗೆ ಒಡ್ಡಲಿದ್ದಾರೆ. 

ಅಭ್ಯರ್ಥಿಗಳಲ್ಲಿ 24 ಮಹಿಳೆಯರು ಹಾಗೂ 201 ಜನರು ಪಕ್ಷೇತರರಿದ್ದಾರೆ.  ‌ವಿದರ್ಭದ 10 ಕ್ಷೇತ್ರಗಳಿಗೆ ಏಪ್ರಿಲ್‌ 10ರಂದು ಚುನಾವಣೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.