ನವದೆಹಲಿ (ಪಿಟಿಐ): ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುವ ದಿನವಾದ ಏ. 7ರಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಬಿಜೆಪಿ ಗುರುವಾರ ಹೇಳಿದೆ. ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸೇರಿ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
‘ಪ್ರಣಾಳಿಕೆಗಿಂತಲೂ ಮುಂಚಿತವಾಗಿ ಪಕ್ಷವು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಿರುದ್ಧದ ‘ಆರೋಪ ಪಟ್ಟಿ’ಯನ್ನು ಶುಕ್ರವಾರ ಬಿಡುಗಡೆ ಮಾಡಲಿದೆ’ ಎಂದು ಬಿಜೆಪಿ ವಕ್ತಾರೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.