ADVERTISEMENT

ಗೋವಿಂದಾಚಾರ್ಯ ದೂರು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2014, 19:30 IST
Last Updated 15 ಏಪ್ರಿಲ್ 2014, 19:30 IST

ನವದೆಹಲಿ  (ಪಿಟಿಐ): ದೇಶದ ಎರಡೂ ಪ್ರಮುಖ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಹಣ ಪಾವತಿ ಮಾಡಿರುವುದರ ಕುರಿತು ಪರಿಶೀಲನೆ ನಡೆಸುವಂತೆ ಆರ್‌ಬಿಐಗೆ ನಿರ್ದೇಶನ ನೀಡುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮಾಜಿ ಪ್ರಚಾರಕ ಕೆ.ಎನ್‌. ಗೋವಿಂದಾಚಾರ್ಯ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

‘ಕೆಲವು ಮಂದಿ  ಪ್ರಚಾರಕ್ಕಾಗಿ ಮುದ್ರಣ, ಎಲೆಕ್ಟ್ರಾನಿಕ್‌ ಮತ್ತು ಅಂತರ್ಜಾಲಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಇಡೀ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನೆ ಅಪಹರಿಸಿವೆ’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್‌. ಸಂಪತ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪ್ರಚಾರದ ಬಜೆಟ್‌ ₨10,000 ಕೋಟಿಯಾಗಿದ್ದು, ಅದರಲ್ಲಿ ಶೇ 90ರಷ್ಟು ಕಪ್ಪು ಹಣ ಎಂದು ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಆನಂದ್‌ ಶರ್ಮಾ ಅವರು ಮಾಡಿರುವ ಆರೋಪವನ್ನು ಅವರು ಪತ್ರದಲ್ಲಿ  ಉಲ್ಲೇಖಿಸಿದ್ದಾರೆ. ಈ ಆರೋಪವನ್ನು ನರೇಂದ್ರ ಮೋದಿ ಅವರು ಅಲ್ಲಗಳೆದಿದ್ದಾರೆ. ಈ ಕುರಿತು ವಿಸ್ತೃತ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.