ADVERTISEMENT

ಚುನಾವಣಾ ಚುಟುಕು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 9:04 IST
Last Updated 18 ಮಾರ್ಚ್ 2014, 9:04 IST

ತಮಿಳುನಾಡು: ಮೈತ್ರಿ ಮಾತುಕತೆ ಪೂರ್ಣ
ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ ತನ್ನ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆ ಬಹುತೇಕ ಸಂಪೂರ್ಣವಾಗಿದೆ ಎಂದು ಬಿಜೆಪಿ ಹೇಳಿದೆ.

‘ಮಿತ್ರಪಕ್ಷಗಳ ಜತೆಗಿನ  ಹೊಂದಾಣಿಕೆ ಪ್ರಕ್ರಿಯೆ ಶೇ 99.5ರಷ್ಟು ಪೂರ್ಣ­ಗೊಂಡಿದೆ. ಮೈತ್ರಿಕೂಟವು ರಾಜ್ಯದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸಲಿದೆ’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಎಂಡಿಕೆ, ಎಂಡಿಎಂಕೆ, ಪಿಎಂಕೆ, ಐಜೆಕೆ ಮತ್ತು ಕೆಎಂಡಿಕೆ ಪಕ್ಷಗಳ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸ್ಪರ್ಧಿಸಲಿರುವ ಕ್ಷೇತ್ರಗಳನ್ನು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್‌ ವಾರಾಂತ್ಯದಲ್ಲಿ ಪ್ರಕಟ ಮಾಡಲಿದ್ದಾರೆ.

 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.