
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಹುಟ್ಟೂರು ಬರ್ಮರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ತಮ್ಮ ಹೆಸರು ಪ್ರಕಟಿಸದಿರುವ ಬಗ್ಗೆ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜಾಟ್ ನಾಯಕ ಕರ್ನಲ್ ಸೋನಾರಾಂ ಅವರನ್ನು ಇಲ್ಲಿಂದ ಕಣಕ್ಕಿಳಿಸಲು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ಬಯಸಿದ್ದಾರೆ ಎಂದು ಹೇಳಲಾಗಿದೆ.
ಬರ್ಮರ್ ಕ್ಷೇತ್ರದಿಂದ ಕೊನೆಯ ಬಾರಿ ಸ್ಪರ್ಧಿಸಲು ಅವಕಾಶ ಕೊಡಬೇಕು ಎಂದು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಅವರನ್ನು ಜಸ್ವಂತ್ ಕೋರಿದ್ದಾರೆ ಎಂದು ತಿಳಿದು ಬಂದಿದೆ. ಈ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.