ADVERTISEMENT

ಪ್ರಿಯಾಂಕಾ ಗಾಂಧಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2014, 19:30 IST
Last Updated 5 ಏಪ್ರಿಲ್ 2014, 19:30 IST

ನವದೆಹಲಿ (ಪಿಟಿಐ): ‘ಮುಂಬರುವ ದಿನಗಳಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಕ್ರಿಯವಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಅವರ ಸಹೋದರ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರ ಪ್ರಚಾರದ ಹೊರೆಯನ್ನು ಕೊಂಚಮಟ್ಟಿಗೆ ಕಡಿಮೆ ಮಾಡಲಿದ್ದಾರೆ’ ಎಂದು ಗಾಂಧಿ ಕುಟುಂಬದ ಆಪ್ತ ಸ್ಯಾಮ್‌ ಪಿತ್ರೋಡಾ ಹೇಳಿದ್ದಾರೆ.

ಪ್ರಿಯಾಂಕಾ ಅವರು ಮಾಧ್ಯಮದವರೊಂದಿಗೆ ಸಂವಾದ ಮತ್ತು ಪ್ರಚಾರ ಸಭೆ ನಡೆಸಲಿದ್ದಾರೆ ಎಂದೂ ಹೇಳಿದ್ದಾರೆ.

‘ಪ್ರಿಯಾಂಕಾ ಗಾಂಧಿ ಅವರು ನಾನು ಸ್ಪರ್ಧಿಸುತ್ತಿರುವ ವಡೋದರ ಲೋಕಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಚುನಾವಣೆ ಪ್ರಚಾರ ಕೈಗೊಂಡರೆ ಕೃತಜ್ಞನಾಗುತ್ತೇನೆ’ ಎಂದು ಈ ಬೆನ್ನಲ್ಲೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಧುಸೂದನ್‌ ಮಿಸ್ತ್ರಿ  ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿರುವ ರಾಯ್‌ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ನಡೆಸಲಿದ್ದಾರೆ ಎಂದು ಹಿಂದೆ ಹೇಳಲಾಗಿತ್ತು. ಹಾಗಿದ್ದರೂ ಅವರು ಮುಖ್ಯ ಪ್ರಚಾರಕಿಯಾಗುವರು  ಎಂಬ ಬಗ್ಗೆ ಆಗಾಗ ವದಂತಿಗಳು ಏಳುತ್ತಲೇ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.