ADVERTISEMENT

ರಾಜಕೀಯ ಜಾಹೀರಾತು ನಿಷೇಧ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2014, 19:30 IST
Last Updated 13 ಏಪ್ರಿಲ್ 2014, 19:30 IST

ಚಂಡಿಗಡ (ಪಿಟಿಐ): ಸರ್ಕಾರ ಮತ್ತು ಸಾರ್ವಜನಿಕ ರಂಗದ ಸಂಸ್ಥೆಗಳ ಮಾಲೀಕತ್ವದ ಕಟ್ಟಡ ಅಥವಾ ಸ್ಥಳಗಳಲ್ಲಿ ರಾಜಕೀಯ ಸ್ವರೂಪದ ಜಾಹೀರಾತುಗಳಿಗೆ ನಿಷೇಧ ಹೇರಲು ಚುನಾವಣಾ ಆಯೋಗ ನಿರ್ಧರಿಸಿದೆ.

ಇಂತಹ ಕಟ್ಟಡಗಳು ಅಥವಾ ಸ್ಥಳಗಳನ್ನು ಬಾಡಿಗೆಗೆ ನೀಡಿದ್ದರೂ ಅಲ್ಲಿ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಇಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಸರ್ಕಾರದ ಆಸ್ತಿ, ಸಾರ್ವಜನಿಕ ಸೊತ್ತುಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ದೂರಿಗೆ ಈ ಪ್ರತಿಕ್ರಿಯೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.