ತಿರುವನಂತಪುರ (ಪಿಟಿಐ): ಅಭ್ಯರ್ಥಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿವರಗಳನ್ನು ಪ್ರಕಟಿಸುವವರು ಹಾಗೂ ಅದನ್ನು ಇತರರ ಜತೆ ಹಂಚಿಕೊಳ್ಳುವವರು ಇನ್ನು ಮುಂದೆ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ.
ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೊಡಿಯ್‌ಕುಣ್ಣಿಲ್ ಸುರೇಶ್ ಅವರು ದಾಖಲಿಸಿದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಳಪ್ಪುರ ಜಿಲ್ಲಾಧಿಕಾರಿ ಎನ್.ಪದ್ಮಕುಮಾರ್ ಈ ಅಂಶವನ್ನು ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ದುರುದ್ದೇಶದಿಂದ ತಮ್ಮ ವರ್ಚಸ್ಸಿಗೆ ಕಳಂಕ ತರುವಂತಹ ನಕಲಿ ಹಾಗೂ ವಿರೂಪಗೊಳಿಸಿದ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್ ಅವರು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.