ಅಮಿತ್ ಶಾ, ಕೇಂದ್ರ ಗೃಹಸಚಿವ & ಸಿದ್ದರಾಮಯ್ಯ, ಮುಖ್ಯಮಂತ್ರಿ
ಜಮ್ಮು– ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಪರಿಚ್ಛೇದ 370 ತೆರವಿನಿಂದ ಕರ್ನಾಟಕಕ್ಕೆ ಏನು ಪ್ರಯೋಜನ? ಕಾಶ್ಮೀರ ವಿಚಾರ ಕರ್ನಾಟಕಕ್ಕೆ ಏಕೆ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಳುತ್ತಾರೆ. ಖರ್ಗೆ ಅವರಿಗೆ 80 ವರ್ಷ ವಯಸ್ಸು. ಅವರಿಗೆ ಇನ್ನೂ ಅರ್ಥವಾಗಿಲ್ಲ, ಜಮ್ಮು–ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎನ್ನುವುದು. ಕಾಶ್ಮೀರಕ್ಕಾಗಿ ಚಿಕ್ಕೋಡಿ ಯುವಜನರು ಪ್ರಾಣ ಕೊಡಲೂ ಸಿದ್ಧರಿದ್ದಾರೆ
–ಅಮಿತ್ ಶಾ, ಕೇಂದ್ರ ಗೃಹಸಚಿವ
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸುತ್ತಾರೆ. ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಶೇ 40 ಕಮಿಷನ್ ಹೊಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಸದಸ್ಯರು ಪ್ರಧಾನಿಗೆ ದೂರು ನೀಡಿದ್ದರು. ಆಗ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬುದನ್ನು ಪ್ರಧಾನಿ ಹೇಳಬೇಕು
–ಸಿದ್ದರಾಮಯ್ಯ, ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.