ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 21:31 IST
Last Updated 26 ಏಪ್ರಿಲ್ 2024, 21:31 IST
   

ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಕೋಮು ದ್ವೇಷ ಹರಡುವ ಹೇಳಿಕೆ  ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೀಡಿದ್ದ ದೂರಿನ ಆಧಾರದಲ್ಲಿ ಚುನಾವಣಾ ಆಯೋಗವು ಮೋದಿ ಅವರ ಬದಲಿಗೆ ಬಿಜೆಪಿಗೆ ನೋಟಿಸ್‌ ನೀಡಿದೆ. ಈ ಮೂಲಕ ಅದು ತಾನು ‘ಅಸಹಾಯಕ ಕೈಗೊಂಬೆ’ ಎಂಬುದನ್ನು ಸಾಬೀತುಪಡಿಸಿದೆ. ಮೋದಿ ಅವರಿಗೆ ನೋಟಿಸ್‌ ನೀಡುವ ಧೈರ್ಯ ಅದಕ್ಕಿಲ್ಲ.

–ಕಪಿಲ್‌ ಸಿಬಲ್‌, ರಾಜ್ಯಸಭಾ ಸದಸ್ಯ

ಮುಸ್ಲಿಮರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕಾಂಗ್ರೆಸ್‌ ಪಕ್ಷವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಯವರ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ. ಇದು ವಿರೋಧ ಪಕ್ಷದ ಗುಪ್ತ ಕಾರ್ಯಸೂಚಿಯಾಗಿದ್ದು, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ಯಾವಾಗಲೂ ಮುಸ್ಲಿಮರಿಗೆ ಬೆಂಬಲ ನೀಡುತ್ತಿದ್ದರು.

ADVERTISEMENT

–ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.