ADVERTISEMENT

ಎಂಥಾ ಮಾತು | ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 9 ಮೇ 2024, 23:14 IST
Last Updated 9 ಮೇ 2024, 23:14 IST
<div class="paragraphs"><p>ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌</p></div>

ಹಿಮಂತ ಬಿಸ್ವ ಶರ್ಮಾ ಹಾಗೂ ಶರದ್‌ ಪವಾರ್‌

   
ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಐದು ಲಕ್ಷ ಮಂದಿಯನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ಉಚಿತವಾಗಿ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುವುದು. ಅಸ್ಸಾಂನಿಂದ ಒಂದು ಲಕ್ಷ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ. ರಾಜ್ಯದ ಯುವಜನರಿಗೆ ಉದ್ಯೋಗ ನೀಡಲು ಬಿಜೆಡಿ ಸರ್ಕಾರ ವಿಫಲವಾಗಿದೆ
-ಹಿಮಂತ ಬಿಸ್ವ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ (ಒಡಿಶಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಾ)
ಲೋಕಸಭಾ ಚುನಾವಣೆಯ ಮೂರು ಹಂತಗಳ ಮತದಾನ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ  ಅವರು ಆತಂಕಗೊಂಡಿದ್ದಾರೆ. ಈ ಕಾರಣಕ್ಕೆ ಅವರು ತಮ್ಮ ಭಾಷಣದಲ್ಲಿ ಮುಸ್ಲಿಮರನ್ನು ಬಹಿರಂಗವಾಗಿ ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಪರಿಸ್ಥಿತಿ ಬದಲಾಗಬಹುದು ಎಂದು ಅವರು ಭಾವಿಸಿರುವಂತಿದೆ 
-ಶರದ್‌ ಪವಾರ್‌, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.