ಸಂವಿಧಾನದ 370 ವಿಧಿಯ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವುದಕ್ಕೆ ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿರುವುದಕ್ಕೆ, ಈ ಚುನಾವಣೆಯಲ್ಲಿ ಜನರು ಕೇಂದ್ರ ಸರ್ಕಾರಕ್ಕೆ ಉತ್ತರ ನೀಡಲಿದ್ದಾರೆ. ಮೇ 7ರಂದು ನಡೆಯಬೇಕಿದ್ದ ಅನಂತನಾಗ್–ರಜೌರಿ ಕ್ಷೇತ್ರದ ಮತದಾನವನ್ನು ಚುನಾವಣಾ ಆಯೋಗವು ಮೇ 25ಕ್ಕೆ ಮುಂದೂಡುವ ಮೂಲಕ ತೊಂದರೆ ಉಂಟುಮಾಡಿದೆ
ಮೆಹಬೂಬಾ ಮುಫ್ತಿ, ಪಿಡಿಪಿ ಅಧ್ಯಕ್ಷೆ
ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಅವರ ಇಚ್ಛೆಯನ್ನು ದೇಶದ ಜನರು ಪೂರೈಸಲಿದ್ದಾರೆ. ದೇಶದ ರಾಜಕೀಯದಲ್ಲಿ ಕಾಂಗ್ರೆಸ್ ಇಲ್ಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಮುನ್ನಡೆಯುತ್ತಿದೆ. ಇಂದು ಭಾರತವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಾತನಾಡುತ್ತಿದೆ ಮತ್ತು ಜಗತ್ತು ಅದನ್ನು ತಲ್ಲೀನತೆಯಿಂದ ಕೇಳುತ್ತಿದೆ
ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.