ಪ್ರಧಾನಿ ನರೇಂದ್ರ ಮೋದಿ ನೇತ್ವತ್ವದ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಕೆಲವು ಮಹಿಳಾ ಕೇಂದ್ರಿತ ಯೋಜನೆಗಳನ್ನು ರೂಪಿಸಿದೆ. ಸೇನೆಯಲ್ಲಿ ಮಹಿಳೆಯರ ನೇಮಕ, ಸೈನಿಕ್ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ, ಹೆರಿಗೆ ರಜೆಯನ್ನು 12 ವಾರದಿಂದ 26 ವಾರಗಳಿಗೆ ವಿಸ್ತರಿಸಿದ್ದು, ಪೋಷಣ್ ಅಭಿಯಾನದ ಮೂಲಕ 10 ಕೋಟಿ ಮಹಿಳೆಯರಿಗೆ ನೆರವು ನೀಡಿದ್ದು.. ಇವು ಅಂಥ ಕೆಲವು ಯೋಜನೆಗಳಾಗಿವೆ. ಉದ್ಯಮಶೀಲತೆಯನ್ನು ಬೆಳೆಸಲು ಮುದ್ರಾ ಯೋಜನೆಯ ಅಡಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.–ನಿರ್ಮಲಾ ಸೀತಾರಾಮನ್, ಕೇಂದ್ರ ಹಣಕಾಸು ಸಚಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.