
ಬೆಂಗಳೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವಕರು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು’ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂಬಿ)ನ ಅರ್ಥಶಾಸ್ತ್ರ ಮತ್ತು ಸಾಮಾಜಿಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ರಾಜೀವ್‌ಗೌಡ ಹೇಳಿದರು.
‘ಪೊಲಿಟಿಕಲ್ ಆಕ್ಷನ್ ಇಂಟರ್ನ್‌ಶಿಪ್’ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜೀವ್ ಗೌಡ ಅವರು, ‘ಚುನಾವಣೆಯಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಜನರು ಹೆಚ್ಚು ಹೆಚ್ಚು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡಲು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.
ಐಎನ್‌ಸಿ ಕನ್ಸಲ್ಟ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಬಿಜೂರ್ ಮಾತನಾಡಿ, ‘ಯುವಕರು ಇಂದು ಸಾಮಾಜಿಕ ಜಾಲತಾಣಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಚುನಾವಣೆಯಲ್ಲಿ ಯುವಕರ ಭಾಗವಹಿಸುವಿಕೆ ಕೊರತೆಯ ಕಾರಣದಿಂದ ಕಡಿಮೆ ಮತದಾನವಾಗುತ್ತಿದೆ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.