ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭೋವಿ ಸಮುದಾಯದ ನಾಯಕರಿಗೆ ಅವಕಾಶ ನೀಡದೇ ಇದ್ದರೆ ಬಿಜೆಪಿಯನ್ನು ನಿರ್ಲಕ್ಷ್ಯ ಮಾಡಬೇಕಾಗುತ್ತದೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಭೋವಿ ಸಮು
ದಾಯಕ್ಕೆ ಟಿಕೆಟ್ ನೀಡಬೇಕು. ಚಿತ್ರದುರ್ಗ ಹಾಗೂ ಕೋಲಾರದಲ್ಲಿ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಬಿಜೆಪಿ ಎದುರು ಇಟ್ಟಿದ್ದೇವೆ. ಒಂದು ಕ್ಷೇತ್ರದಲ್ಲೂ ಅವಕಾಶ ಕಲ್ಪಿಸದೇ ಇದ್ದರೆ ಮತದಾನದ ಸಂದರ್ಭದಲ್ಲಿ ಎದುರಾಗಬಹುದಾದ ತೊಂದರೆಗಳಿಗೆ ಬಿಜೆಪಿಯೇ ಹೊಣೆ ಹೊರಬೇಕಾದೀತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.