ಕಡಪ (ಪಿಟಿಐ): ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಕಿರಣಕುಮಾರ್ ರೆಡ್ಡಿ ಅವರ ಆಪ್ತರಾದ ಜಿ.ವೀರಶಿವ ರೆಡ್ಡಿ ಅವರು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೇರುವುದಾಗಿ ಘೋಷಿಸಿದ್ದಾರೆ.
ಗುರುವಾರ ಮಾಧ್ಯಮದೊಂದಿಗೆ ಮಾತಾಡಿದ ಅವರು, ‘ನಾನು ಯಾವುದೇ ಹುದ್ದೆ, ಟಿಕೆಟ್ ಆಕಾಂಕ್ಷಿಯಲ್ಲ. ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಸಲುವಾಗಿ ಟಿಡಿಪಿ ಸೇರುತ್ತಿದ್ದೇನೆ. ಇನ್ನು ಮೂರು ದಿನಗಳಲ್ಲಿ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಲಿದ್ದೇನೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.