ನವದೆಹಲಿ (ಪಿಟಿಐ): ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅನರ್ಹರೆಂದು ಘೋಷಿಸಬೇಕು ಎಂದು ವಿನಂತಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸದಂತೆ ಅಭ್ಯರ್ಥಿಗಳಿಗೆ ನಿರ್ದೇಶನ ನೀಡಬೇಕು ಎಂದೂ ವಿನಂತಿಸಿಕೊಂಡಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠವು ವಿಚಾರಣೆಗೆ ಕೈಗೆತ್ತಿಕೊಂಡಿತು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿಲ್ಲ ಎಂಬ ಪ್ರಮಾಣಪತ್ರವನ್ನು ಅಭ್ಯರ್ಥಿಗಳಿಂದ ಪಡೆದುಕೊಳ್ಳುವಂತೆ ಮತ್ತು ಆ ನಂತರ ಅವರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ನಾಮಪತ್ರವನ್ನೇ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಬೇಕು ಎಂದು ವಕೀಲ ಎಚ್.ಕೆ. ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.