ADVERTISEMENT

ದೆಹಲಿಯಲ್ಲಿ ಮೋದಿಗೆ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 17 ಮೇ 2014, 7:15 IST
Last Updated 17 ಮೇ 2014, 7:15 IST
ಶನಿವಾರ ದೆಹಲಿಯಲ್ಲಿ ಕಂಡ ದೃಶ್ಯ. - ಎಎಫ್‍ಪಿ ಚಿತ್ರ.
ಶನಿವಾರ ದೆಹಲಿಯಲ್ಲಿ ಕಂಡ ದೃಶ್ಯ. - ಎಎಫ್‍ಪಿ ಚಿತ್ರ.   

ನವದೆಹಲಿ (ಪಿಟಿಐ): ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಸಂಸದೀಯ ಮಂಡಳಿ ಸಭೆಗಾಗಿ ಶನಿವಾರ ಇಲ್ಲಿಗೆ ಆಗಮಿಸಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅದ್ದೂರಿ ಸ್ವಾಗತ ನೀಡಿದರು.

ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಹಲವು ಮುಖಂಡರು ಸ್ವಾಗತಿಸಿದರು. ನಂತರ ಪಕ್ಷದ ಮುಖಂಡರು ಮತ್ತು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರೊಂದಿಗೆ ಅಶೋಕ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿವರೆಗೆ ಮೋದಿ ಅವರು ರೋಡ್‌ಶೊ ನಡೆಸಿದರು.

ಭಾರಿ ಭದ್ರತೆಯ ನಡುವೆ, ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ತಮ್ಮನ್ನು ಸ್ವಾಗತಿಸಲು ಕಾಯ್ದು ನಿಂತಿದ್ದ ಕಾರ್ಯಕರ್ತರತ್ತ ಗೆಲುವಿನ ಚಿಹ್ನೆ ತೋರುತ್ತ ಸಾಗಿದ ಮೋದಿ ಅವರಿಗೆ ಪಕ್ಷದ ಕಾರ್ಯಕರ್ತರು ಬೈಕ್ ರ‌್ಯಾಲಿಯೊಂದಿಗೆ ಸಾಥ್ ನೀಡಿದರು. ಬಳಿಕ ಪಕ್ಷದ ಕಚೇರಿ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಅವರು  ಮಾತನಾಡಿದರು.

ನಂತರ ಸರ್ಕಾರ ರಚನೆಯ ಪ್ರಕ್ರಿಯೆ ಕುರಿತಂತೆ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಸಂಸದೀಯ ಮಂಡಳಿ ಸಭೆಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.