
ಪ್ರಜಾವಾಣಿ ವಾರ್ತೆಲಖನೌ (ಐಎಎನ್‌ಎಸ್): ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಉತ್ತರ ಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಪಕ್ಷ ಬಲವಾಗಿ ನಂಬಿರುವ ‘ಸಾಮಾಜಿಕ ಸದ್ಭಾವನೆ’ ತತ್ವದಡಿ ಎಲ್ಲ ವರ್ಗದವರಿಗೆ ಪಟ್ಟಿಯಲ್ಲಿ ಪ್ರಾತಿನಿಧ್ಯ ನೀಡಲಾಗಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ 17, ಹಿಂದುಳಿದ ವರ್ಗದ 15, ಮುಸ್ಲಿಂ ಸಮುದಾಯದ 19, ಬ್ರಾಹ್ಮಣ ಸಮುದಾಯದ 21 ಮತ್ತು ಠಾಕೂರ್ ಸಮುದಾಯದ ಎಂಟು ಜನರಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದ್ದಾರೆ.
‘ಮಾರ್ಚ್ 22ರಿಂದ ದೇಶದಾದ್ಯಂತ ಸಂಚರಿಸಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತೇನೆ. ಆದರೆ, ಶೇ 90ರಷ್ಟು ಸಮಯವನ್ನು ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಮೀಸಲಿಡುತ್ತೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.