ADVERTISEMENT

ಮತದಾನದ ಅವಧಿ 1 ಗಂಟೆ ವಿಸ್ತರಣೆ?

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2014, 19:30 IST
Last Updated 11 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ­ದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸದ್ಯ ಮತದಾನದ ಅವಧಿ ಒಂಬತ್ತು ಗಂಟೆ ಇದೆ. ಇನ್ನು ಒಂದು ಗಂಟೆ ಹೆಚ್ಚಿಸಲು ಆಯೋಗ ಮುಂದಾಗಿದೆ.­ಮುಖ್ಯ ಚುನಾವಣಾ ಆಯುಕ್ತ ವಿ.ಎಸ್‌. ಸಂಪತ್‌ ಅವರು ಮಂಗಳ­ವಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಮಯ ಹೆಚ್ಚಿಸುವ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT