
ಪ್ರಜಾವಾಣಿ ವಾರ್ತೆನವದೆಹಲಿ (ಐಎಎನ್‌ಎಸ್): ಮತದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಲು, ಇರಬಹುದಾದ ದೋಷಗಳನ್ನು ಸರಿಪಡಿಸಿಕೊಳ್ಳಲು ಮತ್ತು ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳಲು ಮತದಾರರಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ಚುನಾವಣಾ ಆಯೋಗವು ದೇಶದಾದ್ಯಂತ ಮಾರ್ಚ್ 9ರಂದು (ಭಾನುವಾರ) ವಿಶೇಷ ಶಿಬಿರ ಏರ್ಪಡಿಸಿದೆ.
ಗುರುತಿನ ಚೀಟಿ ಇದ್ದರೂ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲ ಎಂಬ ಕಾರಣಕ್ಕೆ ಮತದಾನ ಮಾಡಲು ಅವಕಾಶ ನೀಡಲಿಲ್ಲ ಎಂಬ ದೂರುಗಳು ಈ ಹಿಂದೆ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಆಯೋಗವು ಈ ಶಿಬಿರವನ್ನು ಆಯೋಜಿಸಿದೆ.
ದೇಶದ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ನಡೆಯಲಿದೆ. ಮತಗಟ್ಟೆ ಅಧಿಕಾರಿಯ ಬಳಿಯಲ್ಲಿರುವ ಪಟ್ಟಿಯಲ್ಲಿ ತಮ್ಮ ಹೆಸರುಗಳಿವೆಯೇ ಎಂಬುದನ್ನು ಜನರು ಪರಿಶೀಲಿಸಬಹುದಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಹೋದರೆ, ಹೊಸದಾಗಿ ಅರ್ಜಿ ಸಲ್ಲಿಸಲೂ ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.