ನವದೆಹಲಿ (ಐಎಎನ್‌ಎಸ್): ಜಾತಿ ವಿಷಯವಾಗಿ ನರೇಂದ್ರ ಮೋದಿ ಅವರ ಮೇಲೆ ಶುಕ್ರವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ‘ಮೋದಿಯವರ ಇನ್ನೊಂದು ಹುಸಿ ಮುಖವಾಡ ಕಳಚಿಬಿದ್ದಿದೆ’ ಎಂದು ಲೇವಡಿ ಮಾಡಿದೆ.
‘ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳುವ ಮೂಲಕ ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ. ಈ ರೀತಿ ಸುಳ್ಳಿನ ಕಂತೆ ಹೆಣೆಯುವ ಮೂಲಕ ಅವರು ಪ್ರತಿಯೊಬ್ಬರನ್ನೂ ಮೂರ್ಖರನ್ನಾಗಿಸಲು ಹುನ್ನಾರ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಕೀಲ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.
‘ಮೋದಿ ಮೇಲ್ವರ್ಗಕ್ಕೆ ಸೇರಿದ್ದಾರೆ . ಆದರೆ ಮತದಾರರ ಅನುಕಂಪ ಗಿಟ್ಟಿಸುವ ಸಲುವಾಗಿ ತಾವು ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಹೇಳಿಕೊಂಡಿದ್ದಾರೆ’ ಎಂದು ಗುಜರಾತ್‌್ ಕಾಂಗ್ರೆಸ್‌್ ಗುರುವಾರ ಹೇಳಿಕೆ ಹೊರಡಿಸಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್‌್ ಜೇಟ್ಲಿ, ‘ ಸಾಮಾನ್ಯನೊಬ್ಬನ ಕೈಯಿಂದ ಸೋಲುವುದನ್ನು ಅರಗಿಸಿಕೊಳ್ಳುವುದಕ್ಕೆ ಕಾಂಗ್ರೆಸ್‌ಗೆ ಕಷ್ಟವಾಗುತ್ತಿದೆ. ಆದ್ದರಿಂದ ಇದನ್ನು ವಿವಾದ ಮಾಡುತ್ತಿದೆ’ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.