ಮುಂಬೈ (ಪಿಟಿಐ) : ಇತ್ತೀಚೆಗೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಭೇಟಿ ಮಾಡಿದ್ದರಿಂದ ಮುನಿಸಿಕೊಂಡಿದ್ದ ಶಿವಸೇನೆ, ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿಯಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲು ಶುಕ್ರವಾರ ನಿರ್ಧರಿಸಿದೆ.
‘ಮಹಾರಾಷ್ಟ್ರದಲ್ಲಿ ಮಾತ್ರ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದೇವೆ, ಉತ್ತರ ಪ್ರದೇಶದಲ್ಲಿ ಅಲ್ಲ. ಉತ್ತರ ಪ್ರದೇಶದಲ್ಲಿ 20, ಬಿಹಾರದಲ್ಲಿ 5 ಮತ್ತು ದೆಹಲಿಯಲ್ಲಿ 7 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಶಿವಸೇನೆ ಎಂದು ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.