ADVERTISEMENT

ಲೋಕಸಭೆ ಚುನಾವಣಾ ವೇಳಾಪಟ್ಟಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ದೇಶದಾದ್ಯಂತ ಒಂಬತ್ತು ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರೆತಿದೆ.

ಚುನಾವಣಾ ಆಯೋಗ ಮಾರ್ಚ್‌ 5ರಂದು ಘೋಷಿಸಿದ ಚುನಾವಣಾ ವೇಳಾಪಟ್ಟಿಯನ್ನು ಸರ್ಕಾರ ರಾಷ್ಟ್ರಪತಿಯವರಿಗೆ ಕಳುಹಿಸಿಕೊಟ್ಟಿದೆ.  ಅಧಿಸೂಚನೆ ಹೊರಡಿಸಲು ಒಪ್ಪಿಗೆ ನೀಡುವಂತೆ ಸೋಮವಾರ ಇಲ್ಲಿ ನಡೆದ ಕೇಂದ್ರ ಸಂಪುಟ ಸಭೆ ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್‌ 7ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಮಾರ್ಚ್‌ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 14ರ ಅನ್ವಯ, ಚುನಾವಣಾ ಆಯೋಗವು ಚುನಾವಣೆಯ ದಿನಾಂಕಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಇದಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸಂಪುಟ ರಾಷ್ಟ್ರಪತಿಯವರನ್ನು ಕೋರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.