ADVERTISEMENT

ಸಾರ್ಕ್ ನಾಯಕರಿಗೆ ಮೋದಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಮೇ 2014, 14:25 IST
Last Updated 21 ಮೇ 2014, 14:25 IST

ನವದೆಹಲಿ (ಪಿಟಿಐ): ಪ್ರಧಾನಮಂತ್ರಿ ಪ್ರಮಾಣ ವಚನ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ `ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆ'ಯ (ಸಾರ್ಕ್) ಮುಖಂಡರನ್ನು ಆಹ್ವಾನಿಸುವ ಮೂಲಕ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಮೋದಿ ಅವರು ಸಾರ್ಕ್‌ನ ಮುಖಂಡರಾಗಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಶ್ರೀಲಂಕಾ ಅಧ್ಯಕ್ಷ ಮಹಿಂದ ರಾಜಪಕ್ಷ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ, ಅಪ್ಘಾನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜೈ, ಭೂತಾನ್ ಪ್ರಧಾನಿ ತ್ಸೆರಿಂಗ್ ತೊಬ್ಗೆ, ನೇಪಾಳ ಪ್ರಧಾನಿ ಸುಶೀಲ್ ಕೊಯಿರಾಲ ಮತ್ತು ಮಾಲ್ಡೀವ್ ಅಧ್ಯಕ್ಷ ಅಬ್ದುಲ್ಲಾ ಎಮ್ಮಿನ್ ಅಬ್ದುಲ್ ಗಯೂಮ್ ಅವರನ್ನು ಆಹ್ವಾನಿಸಿದ್ದಾರೆ.

`ಮೇ 26ರಂದು ನಡೆಯುವ ಪ್ರಧಾನಿ ಅವರ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಸಾರ್ಕ್‌ನ  ಎಲ್ಲ ನಾಯಕರಿಗೆ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅವರು ಅಧಿಕೃತ ಆಹ್ವಾನ ಪತ್ರಗಳನ್ನು ಕಳುಹಿಸಿದ್ದಾರೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಬುಧವಾರ ತಿಳಿಸಿದರು.

ಮೋದಿ ಅವರ ಈ ಆಹ್ವಾನಕ್ಕೆ ಕರ್ಜೈ, ರಾಜಪಕ್ಷ ಮತ್ತು ತೊಬ್ಗೆ ಅವರು ಸೇರಿದಂತೆ ಹಲವು ನಾಯಕರು ಸಮಾರಂಭಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದು, ಉಳಿದವರ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿದ್ದೇವೆ ಎಂದು ವಕ್ತಾರರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT