
ಪ್ರಜಾವಾಣಿ ವಾರ್ತೆ
ನವದೆಹಲಿ (ಪಿಟಿಐ): ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಹೀನಾಯ ಸೋಲಿನ ಹೊಣೆಯನ್ನು ಹೊತ್ತುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಸಮಸ್ಯೆಗಳ ವಿರುದ್ಧ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಶುಕ್ರವಾರ ಹೇಳಿದರು.
ಎಐಸಿಸಿಯ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಯಾವುದೇ ಪ್ರಶ್ನೆಗಳನ್ನು ಉತ್ತರಿಸದೆ, ಸೋಲಿನ ಹೊಣೆ ತಾವು ಹೊರುವುದಾಗಿ ಹೇಳಿದ ಅವರು ನೂತನ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ರಾಹುಲ್ ಅವರು ಚುನಾವಣೆಯಲ್ಲಿ ಉಂಟಾಗಿರುವ ಸೋಲು ಕುರಿತಂತೆ ಪಕ್ಷವು ಚಿಂತನೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.