ADVERTISEMENT

ರಾಮನವಮಿ | ಪ.ಬಂಗಾಳದಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಪ್ರಚೋದನೆ: ಮಮತಾ ಬ್ಯಾನರ್ಜಿ

ಪಿಟಿಐ
Published 19 ಏಪ್ರಿಲ್ 2024, 10:51 IST
Last Updated 19 ಏಪ್ರಿಲ್ 2024, 10:51 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ ಚಿತ್ರ)

ಹರಿಹರಪಾರ (ಪ.ಬಂಗಾಳ): ರಾಮನವಮಿ ಆಚರಣೆಯ ಸಂದರ್ಭದಲ್ಲಿ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ADVERTISEMENT

ಅಲ್ಪಸಂಖ್ಯಾತರ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯ ಹರಿಹರಪಾರದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, '2024ರ ಲೋಕಸಭೆ ಚುನಾವಣೆಯು ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಕಡಿಮೆಯೇನಲ್ಲ. ಏಕೆಂದರೆ ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದರೆ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಅಪಾಯವನ್ನುಂಟು ಮಾಡಲಿದೆ' ಎಂದು ಹೇಳಿದರು.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ವೇಳೆ ನಡೆದ ಹಿಂಸಾಚಾರವು ಬಿಜೆಪಿಯ ಪೂರ್ವ ಯೋಜಿತ ಕೃತ್ಯ ಎಂದು ಅವರು ದೂರಿದರು.

ಮುರ್ಷಿದಾಬಾದ್‌ನ ಶಕ್ತಿಪುರ ನಗರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರೆಜಿನಗರದಲ್ಲಿ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

'ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ರಕ್ತಪಾತ ಮತ್ತು ಹಿಂಸಾಚಾರದ ಮೇಲೆ ನಂಬಿಕೆಯನ್ನಿಟ್ಟಿದೆ. ರಾಜ್ಯದಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಬಿಜೆಪಿ ನಾಯಕರು ಆಯುಧಗಳೊಂದಿಗೆ ಮೆರವಣಿಗೆ ನಡೆಸಿ ನ್ಯಾಯಾಯಲದ ಆದೇಶ ಏಕೆ ಉಲ್ಲಂಘಿಸಿದರು? ಅವರಿಗೆ ಅನುಮತಿ ನೀಡಿದವರು ಯಾರು?' ಎಂದು ಮಮತಾ ಪ್ರಶ್ನಿಸಿದರು.

ರಾಮನವಮಿ ಆಚರಣೆ ನಡೆದ ಹಿಂಸಾಚಾರದಲ್ಲಿ 19 ಮಂದಿ ಗಾಯಗೊಂಡಿದ್ದಾರೆ ಎಂದು ಮಮತಾ ತಿಳಿಸಿದರು.

ಮತಗಳನ್ನು ಲೂಟಿ ಮಾಡಲು ಬಿಜೆಪಿ ಕೇಂದ್ರದ ಪಡೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.