ಹೈದರಾಬಾದ್: ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದಲ್ಲಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಮಾಧವಿ ಅವರು ಮಸೀದಿಯತ್ತ ಬಾಣ ಬಿಡುವಂತೆ ಸನ್ನೆ ಮಾಡಿದ ವಿಡಿಯೊವೊಂದು ಹರಿದಾಡಿತ್ತು. ಮಾಧವಿ ಅವರು ಮುಸ್ಲಿಮರ ಭಾವನೆಗಳಿಗೆ ನೋವುಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ, ‘ಅದು ನೈಜ ವಿಡಿಯೊ ಅಲ್ಲ. ಎಫ್‌ಐಆರ್ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗುತ್ತೇನೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.