ADVERTISEMENT

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ಏಜೆನ್ಸೀಸ್
Published 2 ಮೇ 2024, 2:54 IST
Last Updated 2 ಮೇ 2024, 2:54 IST
<div class="paragraphs"><p>ಶ್ಯಾಮ್ ರಂಗೀಲಾ</p></div>

ಶ್ಯಾಮ್ ರಂಗೀಲಾ

   

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.

ಹಾಸ್ಯದ ಮೂಲಕ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಹೆಚ್ಚು ಪ್ರಸಿದ್ಧಿಯಾಗಿರುವ ಶ್ಯಾಮ್ ರಂಗೀಲಾ ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ADVERTISEMENT

ಶೀಘ್ರದಲ್ಲೇ ವಾರಣಾಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಲಾಗುವುದು ಎಂಬ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೆಲವರು ಇದನ್ನು ತಮಾಷೆ ಎಂದುಕೊಂಡಿದ್ದಾರೆ ಆದರೆ ನಾನು ವಾರಾಣಸಿಯಲ್ಲಿ ಮೋದಿ ಎದುರು ಸ್ಪರ್ಧಿಸುತ್ತಿದ್ದೇನೆ. ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ನಾನು ಚುನಾವಣೆಗೆ ಸ್ಪರ್ಧಿಸಲು ಕಾರಣವಿದೆ ಎಂದು ಶ್ಯಾಮ್‌ ರಂಗೀಲಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.